ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅದರಂತೆ, ಕೇಂದ್ರ ರೈಲ್ವೆ ಜೂನಿಯರ್ ಎಂಜಿನಿಯರ್, ಲೋಕೋ ಪೈಲಟ್ ಮತ್ತು ಗಾರ್ಡ್ / ಟ್ರೈನ್ ಮ್ಯಾನೇಜರ್ ಹುದ್ದೆಗಳು ಸೇರಿದಂತೆ ಒಟ್ಟು 1,303 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು rrccr.com ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದೆ.
ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 1303 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 732 ಸಹಾಯಕ ಲೋಕೋ ಪೈಲಟ್, 255 ಟೆಕ್ನಿಷಿಯನ್, 234 ಜೂನಿಯರ್ ಎಂಜಿನಿಯರ್ ಮತ್ತು 82 ಗಾರ್ಡ್ / ಟ್ರೈನ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಶೈಕ್ಷಣಿಕ ಅರ್ಹತೆ
ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎನ್ಸಿವಿಟಿ / ಎಸ್ಸಿವಿಟಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಟ್ರಿಕ್ಯುಲೇಷನ್ / ಎಸ್ಎಸ್ಎಲ್ಸಿ ಮತ್ತು ಐಟಿಐ ಟ್ರೇಡ್ಗಳನ್ನು ಹೊಂದಿರಬೇಕು ಅಥವಾ ವಿವಿಧ ಎಂಜಿನಿಯರಿಂಗ್ ವಿಭಾಗಗಳಲ್ಲಿ 3 ವರ್ಷಗಳ ಡಿಪ್ಲೊಮಾ ಹೊಂದಿರಬೇಕು.
ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎನ್ಸಿವಿಟಿ/ ಎಸ್ಸಿವಿಟಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಟ್ರಿಕ್ಯುಲೇಷನ್/ ಎಸ್ಎಸ್ಎಲ್ಸಿ ಮತ್ತು ಐಟಿಐ ಉತ್ತೀರ್ಣರಾಗಿರಬೇಕು. ಜೆಇ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂಲ ವಿಭಾಗದ ಯಾವುದೇ ಉಪವಿಭಾಗದೊಂದಿಗೆ ಮೂರು ವರ್ಷದ ಡಿಪ್ಲೊಮಾ ಪಡೆದಿರಬೇಕು.
ವಯೋಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 45 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 47 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.