ಬೆಂಗಳೂರು: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಕೊರೋನಾದಿಂದ ಏಕಾಏಕಿ ಪ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ.
ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಅನಗತ್ಯವಾಗಿ ಹೆಚ್ಚು ಜನರು ನಿಲ್ದಾಣಕ್ಕೆ ಬರದಂತೆ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಎಸ್ಸಾರ್ ರೈಲ್ವೇ ನಿಲ್ದಾಣ, ಕಂಟೋನ್ಮೆಂಟ್ ನಿಲ್ದಾಣ, ಯಶವಂತಪುರ ಮತ್ತು ಕೆಆರ್ ಪುರಂ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದೆ.