
ನವದೆಹಲಿ: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ.
ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿತ್ತು. ಇದೀಗ ಕನ್ನಡದಲ್ಲಿ ಮುಂಬಡ್ತಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ರೈಲ್ವೆ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಸಚಿವರ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ.
ಈಗಾಗಲೇ ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆ ಕನ್ನಡದಲ್ಲಿ ನಡೆಸಲಾಗುವುದು ಎಂದು ಸಚಿವ ಸೋಮಣ್ಣ ಘೋಷಿಸಿದ್ದಾರೆ. ಇದೀಗ ಇಲಾಖೆಗೆ ಸೇರಿದ ನಂತರ ಮುಂಬಡ್ತಿ ಪರೀಕ್ಷೆಯನ್ನು ಕೂಡ ಕನ್ನಡದಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡಿಗ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.