ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಊರಿಗೆ ಹೊರಟ ಜನರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.
ನವೆಂಬರ್ 5 ರಿಂದ 30 ರವರೆಗೆ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್, ಕೋರಮಂಗಲ ಬಿಡಿಎ ಕಾಂಪ್ಲೆಕ್ಸ್, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್, ಎಲೆಕ್ಟ್ರಾನಿಕ್ ಸಿಟಿ KSSIDC ಕಾಂಪ್ಲೆಕ್ಸ್ ಗಳಲ್ಲಿರುವ ಟಿಕೆಟ್ ಬುಕ್ಕಿಂಗ್ ಸೆಂಟರ್ ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲಾಗಿದ್ದು ಈ ಟಿಕೆಟ್ ಬುಕಿಂಗ್ ಕೇಂದ್ರಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಹೇಳಲಾಗಿದೆ.