
ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ.
ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು ಎಂದು ಹೇಳಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ನೊಂದು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.