ನವದೆಹಲಿ: ವಂದೇ ಭಾರತ್ ಸ್ಲೀಪರ್ ಕ್ಲಾಸ್ ರೈಲಿನ ಪ್ರಾಯೋಗಿಕ ಓಡಾಟ ಇನ್ನೆರಡು ತಿಂಗಳಲ್ಲಿ ಆರಂಭವಾಗಲಿದೆ.
ಪ್ರಸ್ತುತ, ರೈಲ್ವೇ ವಂದೇ ಭಾರತ್ ಎಕ್ಸ್ ಪ್ರೆಸ್ ಅನ್ನು ಓಡಿಸುತ್ತಿದೆ. ಇದು ಕೇವಲ ಚೇರ್ ಕಾರ್ ಗಳನ್ನು ಹೊಂದಿದೆ. ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ಜನರಿಂದ ಬೇಡಿಕೆ ಇದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನವದೆಹಲಿಯಲ್ಲಿ ಹೇಳಿದ್ದಾರೆ.
ವಂದೇ ಭಾರತ್ ರೈಲು ಮೊದಲ ಸ್ವದೇಶಿ ಅರೆ ವೇಗದ ರೈಲು. ಮುಂದಿನ ಐದು ವರ್ಷಗಳಲ್ಲಿ ಸರ್ಕಾರವು ರೈಲು ಮೂಲಸೌಕರ್ಯ ಅಭಿವೃದ್ಧಿ ಮತ್ತು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸುವತ್ತ ಹೆಚ್ಚಿನ ಗಮನ ಹರಿಸಲಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ 35 ಸಾವಿರ ಕಿಲೋಮೀಟರ್ ರೈಲು ಹಳಿಗಳನ್ನು ನಿರ್ಮಿಸಲಾಗಿದೆ. ಕಡಿಮೆ ಆದಾಯದ ಗುಂಪುಗಳಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸುವತ್ತ ಸರ್ಕಾರ ಗಮನಹರಿಸುತ್ತಿದೆ. ಅಮೃತ್ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.