ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.