ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಇನ್ನೂ, ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ನಗರದ ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಕೆ ಆರ್ ಮಾರ್ಕೆಟ್, ವಿಜಯನಗರ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್. ಹೆಬ್ಬಾಳ, ಯಲಹಂಕ, ಕಾರ್ಪೊರೇಷನ್ ಸರ್ಕಲ್, ಸೇರಿ ಬೆಂಗಳೂರು ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, , ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.