ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 3ರವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಚಾಮರಾಜನಗರ, ಮೈಸೂರು, ಕೋಲಾರ, ರಾಮನಗರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊಡಗು, ಶಿವಮೊಗ್ಗ, ವಿಜಯನಗರ, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ಧಾರವಾಡ, ರಾಯಚೂರು, ಹಾವೇರಿ, ಗದಗ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.