
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ.
ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಲಾಗಿದೆ.