ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳ ವ್ಯಾಪ್ತಿಯ ಅಲ್ಲಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಂಭವ ಇದೆ. ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಚಂಡಮಾರುತ ಪರಿಚಲನೆ ಮುಂದುವರೆಯುತ್ತಿದೆ. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.