ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರಿನಲ್ಲಿ 68 ಮಿ.ಮೀ. ಮಳೆಯಾಗಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ದೋರನಹಳ್ಳಿಯಲ್ಲಿ 103 ಮಿ.ಮೀ., ಬೀದರ್ ಜಿಲ್ಲೆ ಔರಾದ ತಾಲೂಕಿನ ದಿಗ್ಗಿಯಲ್ಲಿ 36 ಮಿ.ಮೀ. ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಏಪ್ರಿಲ್ 30 ರಿಂದ ಮೇ 2 ರವರೆಗೆ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮುಂದಿನ ಎರಡು ದಿನಗಳ ಕಾಲ ಕೊಪ್ಪಳ, ರಾಯಚೂರು, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ ಆಗಲಿದೆ. ಎರಡು ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿರುವುದರಿಂದ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಗಣನೀಯ ಕುಸಿತ ಕಂಡಿದೆ.