alex Certify ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಮಾರ್ಚ್ 26 ರಿಂದ 31 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 26 ಮತ್ತು 27ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್ 28ರಂದು ಯಾವುದೇ ಮಳೆ ಮುನ್ಸೂಚನೆ ನೀಡಲಾಗಿಲ್ಲ.

ಮಾರ್ಚ್ 30ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾರ್ಚ್ 31ರಂದು ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆ ಮುನ್ಸೂಚನೆ ಇಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...