alex Certify ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ,

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಯಲ್ಲಿಯೂ ಮಳೆಯಾಗುವ ಸಂಭವ ಇದೆ. ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...