ಬೆಂಗಳೂರು: ಶುಕ್ರವಾರದಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 21 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಏಪ್ರಿಲ್ 21, 22 ರಂದು ಉಡುಪಿ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ.
ಏಪ್ರಿಲ್ 21ರಿಂದ 25ರ ವರೆಗೆ ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ, ಏಪ್ರಿಲ್ 21, 22 ಮತ್ತು 25 ರಂದು ಬೀದರ್, ಕಲಬುರ್ಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಏಪ್ರಿಲ್ 23 ರಿಂದ 25 ರವರೆಗೆ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 21ರಿಂದ 25ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಏಪ್ರಿಲ್ 23ರಿಂದ 25ರವರೆಗೆ ಚಾಮರಾಜನಗರ, ಕೋಲಾರ, ಮೈಸೂರು ಜಿಲ್ಲೆಗಳ ಕೆಲವು ಕಡೆ ಮಳೆ ಆಗಲಿದ್ದು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲ್ಲ ಮುನ್ಸೂಚನೆ ನೀಡಿದೆ.