
ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.
ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ರಾಮನಗರ, ವಿಜಯನಗರ, ಕೋಲಾರ, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು ಮತ್ತು ಕರಾವಳಿಯ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.