ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಮಾಹಿತಿ ನೀಡಿದೆ.
ಗುರುವಾರ ರಾಜ್ಯದ ಯಾವುದೇ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿಲ್ಲ. ಕರಾವಳಿಯ ಒಂದೆರಡು ಪ್ರದೇಶಗಳಲ್ಲಿ, ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದ್ದು, ಒಣಹವೆ ಮುಂದುವರೆಯುವ ಸಂಭವ ಇದೆ ಎಂದು ಹೇಳಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಂಭವವಿದೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ಶುಕ್ರವಾರದಿಂದ ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹೇಳಲಾಗಿದೆ.