
ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಮಳೆಯಾಗುವ ಸಂಭವವಿದೆ.
ಬೆಂಗಳೂರಿನ ಹಲವು ಕಡೆ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.