alex Certify ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರಮಟ್ಟದಿಂದ 900 ಕಿಲೋಮೀಟರ್ ಎತ್ತರದಲ್ಲಿ ಛತ್ತೀಸ್ಗಡದಿಂದ ತಮಿಳುನಾಡು ಮಧ್ಯಭಾಗದವರೆಗೆ ಟ್ರಫ್ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹಬೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...