alex Certify ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ.

ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಏಪ್ರಿಲ್ 30 ರಂದು ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಅದೇ ರೀತಿ ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ದಾವಣಗೆರೆ ಜಿಲ್ಲೆಯಲ್ಲಿ ಏಪ್ರಿಲ್ 30 ರಿಂದ 3 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ 2ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...