ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ತುಮಕೂರು, ವಿಜಯನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ತಾಲೂಕಿನ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಿಡಿಲು ಬಡಿದು ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟಿದ್ದಾರೆ.