
ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವಡೆ ಮಳೆ ಆಗುವ ಸಂಭವ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು. ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.