ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಭಾರಿ ಮಳೆ ಆಗುವ ಸಂಭವ ಇದೆ.
ಅರಬ್ಬಿ ಸಮುದ್ರದಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಕೆಲವು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.