
ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 4ರವರೆಗೆ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಇರಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬುಧವಾರ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕಲಬುರ್ಗಿಯಲ್ಲಿ ಅತಿ ಹೆಚ್ಚು 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.