ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಅಲ್ಲಿದೆ ಎಂದು ಹೇಳಲಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು, ಕೋಲಾರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.