
ಬೆಂಗಳೂರು: ನಾಳೆಯಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 25 ರಿಂದ 28 ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಮಾರ್ಚ್ 25ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಾರ್ಚ್ 26 ಮತ್ತು 27ರಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಮಾರ್ಚ್ 28ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಕಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಮಳೆ ಮುನ್ಸೂಚನೆ ನೀಡಿಲ್ಲ.