alex Certify ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ಜಿಲ್ಲೆಗಳಲ್ಲಿ ಏಪ್ರಿಲ್ 29 ರವರೆಗೆ ಗುಡುಗು ಮಿಂಚು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 28ರಿಂದ ಮಳೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...