ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತ ಪ್ರಭಾವದಿಂದ ಮುಂಗಾರು ದುರ್ಬಲಗೊಂಡಿತ್ತು. ಈಗ ಚಂಡಮಾರುತ ದುರ್ಬಲವಾಗಿ ಮುಂಗಾರು ಚುರುಕಾಗುತ್ತಿದೆ. ಭಾನುವಾರ ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಮಳೆಯಾಗಿದೆ.
ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 45 ರಿಂದ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.