alex Certify ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತ ಪ್ರಭಾವದಿಂದ ಮುಂಗಾರು ದುರ್ಬಲಗೊಂಡಿತ್ತು. ಈಗ ಚಂಡಮಾರುತ ದುರ್ಬಲವಾಗಿ ಮುಂಗಾರು ಚುರುಕಾಗುತ್ತಿದೆ. ಭಾನುವಾರ ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಮಳೆಯಾಗಿದೆ.

ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಗಂಟೆಗೆ 45 ರಿಂದ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...