ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತ ಚುರುಕಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತಗಳು ರೂಪುಗೊಂಡಿವೆ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ಸಾಧಾರಣ ಮಳೆ ಆಗಲಿದ್ದು, ಮಂಗಳವಾರ ಮತ್ತು ಬುಧವಾರ ಉತ್ತಮ ಮಳೆ ಆಗಲಿದೆ. ಭಾನುವಾರ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ.