
ಬೆಂಗಳೂರು: ಏಪ್ರಿಲ್ 15 ರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 11ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ನಂತರ ಮೂರು ದಿನ ಒಣಹಾವೆ ಮುಂದುವರೆಯಲಿದೆ. ಏಪ್ರಿಲ್ 15 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ, ಕೊಡಗು, ಹಾಸನ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಬೀದರ್ ಮೊದಲಾದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.