alex Certify ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಕಲಬುರ್ಗಿ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಏಪ್ರಿಲ್ 8ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ಮತ್ತು 10ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...