ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವಡೆ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಹಂಗಾಮಿನ ಬೆಳೆಗಳ ಕೊಯ್ಲು ನಡೆಯುತ್ತಿದ್ದು, ಮಳೆಯಾಗುತ್ತಿರುವುದರಿಂದ ರೈತಾಪಿ ವರ್ಗಕ್ಕೆ ಸಮಸ್ಯೆಯಾಗಿದೆ.