alex Certify ಎರಡು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದೆರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲ್ಬುರ್ಗಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಭಾನುವಾರ ಕಲಬುರ್ಗಿ ನಗರದಲ್ಲಿ 3 ಸೆಂಟಿಮೀಟರ್, ಮಹಾಗಾಂವ್ ನಲ್ಲಿ ಒಂದು ಸೆಂಟಿಮೀಟರ್ ಮಳೆಯಾಗಿದೆ. ಮುಂದಿನ ಒಂದೆರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಕಲಬುರ್ಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...