
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 23ರಿಂದ 25ರವರೆಗೆ ವ್ಯಾಪಕ ಮಳೆಯಾಗಲಿದೆ. ಮೇ 23 ರಂದು ಮೈಸೂರು, ಕೊಡಗು, ಮೇ 24 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಮೇ 23ರಿಂದ 25ರ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.