ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಕುಸಿತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ, ಒಣಹವೆ ಮುಂದುವರೆದಿದೆ.
ಮುಂದಿನ 24 ಗಂಟೆಗಳ ನಂತರಕ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.