ಬೆಂಗಳೂರು: ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರಿಂದಾಗಿ ನವೆಂಬರ್ 2ರಿಂದ 8ರವರೆಗೆ ದೇಶಾದ್ಯಂತ ವಿವಿಧ ಭಾಗಗಳಲ್ಲಿ ಮಳೆ ಆಗುವ ಸಂಭವ ಇದೆ. ನವೆಂಬರ್ 4 ರಿಂದ 8 ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಕೋಲಾರ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.