ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಕರಾವಳಿಯ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 26, 27ರಂದು 12 ಸೆ.ಮೀ.ನಿಂದ 20 ಸೆ.ಮೀ.ವರೆಗೆ ಮಳೆಯಾಗುವ ಸಂಭವ ಇದ್ದು, ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 11 ಸೆ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.