
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 26 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ತುಂತುರು ಮಳೆ ಆಗಲಿದೆ ಎಂದು ಹೇಳಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಭಾಗದ ಹಲವೆಡೆ ಮಳೆಯಾಗಿದೆ.