ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಆಗಸ್ಟ್ 1 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 28 ರಿಂದ ಆಗಸ್ಟ್ 1 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ ಹಾಗೂ ಹತ್ತಿರದ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಜೋರು ಗಾಳಿ ಬೀಸಲಿದ್ದು, ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.