alex Certify Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ರಾಜ್ಯದ ಹಲವು ಕಡೆ ಮಳೆರಾಯನ ಅಬ್ಬರ ಕಡಿಮೆಯಾಗಿದ್ದು, ಮತ್ತೆ ರೈತರಿಗೆ ಆತಂಕ ಶುರುವಾಗಿದೆ. ಬಿಸಿಲಿನ ತಾಪಮಾನಕ್ಕೆ ಜಲಮೂಲಗಳೆಲ್ಲ ಬರಿದಾಗುತ್ತಲೇ ಇವೆ. ಕೃಷಿ ಚಟುವಟಿಕೆಗಳಿಗೆ ನೀರಿಲ್ಲದೇ ರೈತರು ಆಕಾಶದತ್ತ ನೋಡುತ್ತಾ ಕುಳಿತಿದ್ದಾರೆ.

ಇದರ ನಡುವೆ ಹವಾಮಾನ ಇಲಾಖೆ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಆಗಸ್ಟ್ 20ರ ಬಳಿನ ಮುಂಗಾರು ಮತ್ತೇ ಚುರುಕಾಗಲಿದೆ, ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, , ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ,ಕೊಡಗು, ಕೋಲಾರ, ಮಂಡ್ಯ, , ತುಮಕೂರು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...