ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ಇತ್ತೀಚೆಗೆ ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಿತ್ತು. ಕೆಆರ್ ನಗರ ತಾಲೂಕಿನ ವಿವಿಧೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಮಳೆಯಾಗಿದೆ.ಹೆಬ್ಬಾಳು, ಬ್ಯಾಡರಹಳ್ಳಿ, ಕಗ್ಗರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಮಳೆಯಾಗಿದೆ. ಬಿರುಗಾಳಿ ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇನ್ನೂ, ಬೆಂಗಳೂರಿನ ಜನತೆಗೆ ಕೂಡ ವರುಣ ತಂಪೆರೆದಿದ್ದಾನೆ. ಬೆಂಗಳೂರಿನ ಹಲವು ಕಡೆ ಭಾರಿ ಮಳೆಯಾಗಿದೆ.