ಬೆಂಗಳೂರು : ರೈತ ಬೆಳೆದಂತಹ ಬೆಳೆ ಕೈಗೆ ಸಿಗುವ ಹೊತ್ತಲ್ಲಿ ಮಳೆರಾಯ ಹಲವು ಕಡೆಅಬ್ಬರಿಸುತ್ತಿದ್ದಾನೆ. ಇದೀಗ ಡಿ.13 ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಡಿಸೆಂಬರ್ 13 ರಿಂದ ರಾಜ್ಯದ 18 ಕ್ಕೂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.
ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಡಿಸೆಂಬರ್ 13 ರಿಂದ 18 ರವರೆಗೆ ಮಳೆಯಾಗುವ ಸಂಭವವಿದೆ.
ಎರಡನೇ ವಾಯುಭಾರ ಕುಸಿತ ಡಿಸೆಂಬರ್ 16ರ ನಂತರ ರೂಪುಗೊಳ್ಳಲಿದ್ದು, ರಾಜ್ಯದಲ್ಲಿ ಡಿಸೆಂಬರ್ 17, 18ರ ವೇಳೆಗೆ ಮಳೆಯಾಗುವ ಸಂಭವ ಇದೆ.
ಭಾರಿ ಮಳೆ ಹಿನ್ನೆಲೆ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು , ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.