ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು, ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗಲಿದೆ.
ಡಿ, 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.’ಡಿಸೆಂಬರ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ. ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಥಂಡಿ ವಾತಾವರಣ ಮುಂದುವರೆಯಲಿದ್ದು, ದಟ್ಟ ಮಂಜು ಹಾಗೂ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು. ಮೈಸೂರು ಮಂಡ್ಯ ಜಿಲ್ಲೆಯಲ್ಲಿ ಡಿ.24 ಹಾಗೂ ಡಿ.25 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.