ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿ.18 ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮೈ ಕೊರೆವ ಚಳಿ ಇದ್ದು, ಇದರ ನಡುವೆ ಮಳೆ ಮುನ್ಸೂಚನೆ ನೀಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.