ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು, ಮುಂದಿನ 3-4 ದಿನ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ. ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಥಂಡಿ ವಾತಾವರಣ ಮುಂದುವರೆಯಲಿದ್ದು, ದಟ್ಟ ಮಂಜು ಹಾಗೂ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು. ಮೈಸೂರು ಮಂಡ್ಯ ಜಿಲ್ಲೆಯಲ್ಲಿ ಡಿ.24 ಹಾಗೂ ಡಿ.25 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.