ಬೆಂಗಳೂರು : ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜ.20 ರಂದು ಇಂದು ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಸೇರಿ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ಭಾನುವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಮೋಡ ಕವಿದ ವಾತಾವರಣ ಮತ್ತು ಒಣಹವೆ ಮುಂದುವರೆಯಲಿದೆ. ಬುಧವಾರ ಮತ್ತು ಗುರುವಾರದಿಂದ ರಾಜ್ಯಾದ್ಯಂತ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.