‘ಫೆಂಗಲ್’ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ. ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಮುಂದಿನ 5 ದಿನ ಮಳೆಯಾಗಲಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ನಿನ್ನೆ ಯೆಲ್ಲೋ ಅಲರ್ಟ್ ಘೋಷಿಸಿತ್ತು ಬೆಂಗಳೂರು, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಈ ವಾರವಿಡಿ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.