ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ. ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗುವ ಸಂಭವವವಿದೆ.
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.