ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ, ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಭಾರಿ ಮಳೆಯಾಗಲಿದ್ದು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದ್ದು ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕೈದು ದಿನದ ಬಳಿಕ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.